ಕುಶಾಲನಗರದ ನೂತನ ತಹಶೀಲ್ದಾರ್ ರಮೇಶ್ ಬಾಬು ಅಧಿಕಾರ ಸ್ವೀಕಾರ

Shreya Hegde
0

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯಿಂದ ಆತ್ಮೀಯ ಸ್ವಾಗತ, ಗೌರವ ಸನ್ಮಾನ‌




ಕುಶಾಲನಗರ: ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ನೂತನ ತಹಶೀಲ್ದಾರರಾಗಿ ಅಧಿಕಾರ ವಹಿಸಿಕೊಂಡಿರುವ ರಮೇಶ್ ಬಾಬು ಅವರನ್ನು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ಕೊಡಗು ಜಿಲ್ಲಾ ಹಾಗೂ ಕುಶಾಲನಗರ ತಾಲ್ಲೂಕು ಘಟಕದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಿ, ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.


ಕುಶಾಲನಗರ ತಾಲ್ಲೂಕು ಕಂದಾಯ ಇಲಾಖೆಯ ಕಚೇರಿಯಲ್ಲಿ ನಡೆದ ಸರಳ ಹಾಗೂ ಅರ್ಥಪೂರ್ಣ ಸಮಾರಂಭದಲ್ಲಿ ಸಂಘಟನೆಯ ಪದಾಧಿಕಾರಿಗಳು ನೂತನ ತಹಶೀಲ್ದಾರರಿಗೆ ಶಾಲು ಹೊದೆಸಿ, ಫಲಪುಷ್ಪ ನೀಡಿ ಆತ್ಮೀಯವಾಗಿ ಅಭಿನಂದಿಸಿದರು. ಸಂಘಟನೆಯ ಮುಖಂಡರು ಹಾಗೂ ಪದಾಧಿಕಾರಿಗಳ ಪ್ರೀತಿಯ ಸ್ವಾಗತಕ್ಕೆ ಹರ್ಷ ವ್ಯಕ್ತಪಡಿಸಿದ ನೂತನ ತಹಶೀಲ್ದಾರ್ ರಮೇಶ್ ಬಾಬು ಅವರು ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಅವರು, "ಕುಶಾಲನಗರ ತಾಲ್ಲೂಕಿನ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ, ಜನಪರವಾಗಿ ಕಾರ್ಯನಿರ್ವಹಿಸುವುದು ನನ್ನ ಮುಖ್ಯ ಗುರಿಯಾಗಿದೆ. ಕಂದಾಯ ಇಲಾಖೆಯ ಎಲ್ಲಾ ಕೆಲಸ ಕಾರ್ಯಗಳು ಸುಗಮವಾಗಿ ನಡೆಯಲು ಹಾಗೂ ತಾಲ್ಲೂಕಿನ ಅಭಿವೃದ್ಧಿಗೆ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ. ಎಲ್ಲರ ಸಹಕಾರದೊಂದಿಗೆ ಉತ್ತಮ ಆಡಳಿತ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ" ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ಕೊಡಗು ಜಿಲ್ಲಾಧ್ಯಕ್ಷ ಫ್ರಾನ್ಸಿಸ್ ಡಿಸೋಜ ಮತ್ತು ಜಿಲ್ಲಾ ಉಪಾಧ್ಯಕ್ಷ ರಾಜಶೇಖರ್ ಗೌಡ ಮತ್ತು ಕರವೇ ಸ್ವಾಭಿಮಾನಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಜಯಶ್ರೀ ಮುರುಗೇಶ್ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಣಿಕಂಠ ಮತ್ತು ಜಿಲ್ಲಾ ಖಜಾಂಜಿ ಅಂತೋನಿ ಮತ್ತು ಮತ್ತು ಕುಶಾಲನಗರ ತಾಲ್ಲೂಕು ಅಧ್ಯಕ್ಷ ಕೆ.ಎಸ್. ಶಿವ ಮತ್ತು ತಾಲ್ಲೂಕು ಉಪಾಧ್ಯಕ್ಷ ನಾಸಿರ್ ಮತ್ತು ತಾಲ್ಲೂಕು ಸಂಘಟನಾಕಾರರಾದ ವಿ.ಪಿ. ಚಂದ್ರು ಮತ್ತು ತಾಲ್ಲೂಕು ಮಹಿಳಾ ಘಟಕದ ಉಪಾಧ್ಯಕ್ಷೆ ದಿವ್ಯ ಡಿಸೋಜ ಮತ್ತು ತಾಲ್ಲೂಕು ಗೌರವಾಧ್ಯಕ್ಷೆ ನಾಗರತ್ನ ಮತ್ತು ಕುಶಾಲನಗರ ನಗರ ಘಟಕದ ಗೌರವಾಧ್ಯಕ್ಷ ವಿಲ್ಸನ್ ಮತ್ತು ಆರ್ಮಿ ದಿನೇಶ್ ಮತ್ತು ರಫೀಕ್ ಮತ್ತು ಜೈರುದ್ದೀನ್ ಮತ್ತು ಅನಿಫ್ ಮತ್ತು ಪ್ರಶಾಂತ್ ಸೇರಿದಂತೆ ಇನ್ನಿತರ ಪದಾಧಿಕಾರಿಗಳು ಸದಸ್ಯರು ಭಾಗವಹಿಸಿದರು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top