ಮೀನಾಕ್ಷಿ ಬಿ. ಯವರಿಗೆ ಪಿಎಚ್.ಡಿ. ಪದವಿ ಪ್ರದಾನ

Shreya Hegde
0



ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ, ಪ್ರಸ್ತುತ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಮೀನಾಕ್ಷಿ ಬಿ.ಯವರು ದೈಹಿಕ ಶಿಕ್ಷಣ ವಿಷಯದಲ್ಲಿ ಮಂಗಳೂರು ವಿವಿಯಿಂದ ಪಿಎಚ್.ಡಿ. ಪದವಿ ಪಡೆದುಕೊಂಡಿದ್ದಾರೆ. 


ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಹಾಗೂ ಮುಖ್ಯಸ್ಥರಾದ ಡಾ. ಜೆರಾಲ್ಡ್ ಸಂತೋಷ್ ಡಿಸೋಜರವರ ಮಾರ್ಗದರ್ಶನದಲ್ಲಿ ‘ಭಾರತೀಯ ಸನ್ನಿವೇಶದಲ್ಲಿ ಕ್ರೀಡಾಪಟುಗಳ ಲಿಂಗ, ವಯಸ್ಸು ಹಾಗೂ ಕ್ರೀಡೆಯ ಪ್ರಕಾರಗಳ ಆಧಾರದಲ್ಲಿ ಉಂಟಾಗುವ ಒತ್ತಡ ಮತ್ತು ಅದನ್ನು ನಿಭಾಯಿಸುವ ತಂತ್ರಗಳ ನಡುವಿನ ಸಂಬಂಧ’ ಎಂಬ ವಿಷಯದ ಕುರಿತು ಸಂಶೋಧನಾ ಪ್ರಬಂಧ ಮಂಡಿಸಿ ಡಾಕ್ಟರೇಟ್ ಪದವಿ ಗಳಿಸಿದ್ದಾರೆ. 


2002ರಲ್ಲಿ ಕ್ರೀಡಾ ದತ್ತು ಸ್ವೀಕಾರ ಯೋಜನೆಯಡಿ ಆಳ್ವಾಸ್ ಪಿಯು ಕಾಲೇಜಿಗೆ ಪ್ರವೇಶ ಪಡೆದಿದ್ದ ಮೀನಾಕ್ಷಿಯವರು ಪದವಿ, ಬಿ.ಪಿ.ಎಡ್. ಹಾಗೂ ಎಂ.ಪಿ.ಎಡ್. ಶಿಕ್ಷಣವನ್ನು ಆಳ್ವಾಸ್‌ನಲ್ಲಿಯೇ ಪೂರೈಸಿದ್ದಾರೆ. ರಾಷ್ಟ್ರೀಯ ಮಟ್ಟದ 4*400 ಮೀಟರ್ ರಿಲೇ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿರುವ ಅವರು ಉತ್ತಮ ಕ್ರೀಡಾಪಟುವಾಗಿಯೂ ಗುರುತಿಸಿಕೊಂಡಿದ್ದಾರೆ. ಕಳೆದ 14 ವರ್ಷಗಳಿಂದ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅವರು ಪ್ರಸ್ತುತ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಒಡ್ಡೂರು ಗಂಜಿಮಠದ ದಿನೇಶ್ ನಾಯ್ಕರವರ ಪತ್ನಿ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅಭಿನಂದನೆ ಸಲ್ಲಿಸಿದ್ದಾರೆ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top