ತುಳು ಅಕಾಡೆಮಿಯ ಸಿರಿ ಚಾವಡಿಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಗೌರವ

Shreya Hegde
0



ಮಂಗಳೂರು: 71ನೆಯ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಶಸ್ತಿ ಪುರಸ್ಕೃತರಾದ ಸಾಧಕರನ್ನು ಗೌರವಿಸುವ ಅರ್ಥಪೂರ್ಣ ಸನ್ಮಾನ ಕಾರ್ಯಕ್ರಮವು ಇತ್ತೀಚೆಗೆ ಮಂಗಳೂರಿನ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ‘ಸಿರಿ ಚಾವಡಿ’ಯಲ್ಲಿ ನಡೆಯಿತು.


ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎ. ಸಿ. ಭಂಡಾರಿ ಹಾಗೂ ಹಿರಿಯ ಜಾನಪದ ತಜ್ಞರು ಮತ್ತು ಸಂಶೋಧಕರಾದ ಡಾ. ಇಂದಿರಾ ಹೆಗ್ಡೆ ಅವರನ್ನು ಕಲಬುರಗಿ ಆಕಾಶವಾಣಿಯ ನಿವೃತ್ತ ಕಾರ್ಯಕ್ರಮ ಮುಖ್ಯಸ್ಥರು ಹಾಗೂ ಕಲಬುರಗಿ ದಕ್ಷಿಣ ಕನ್ನಡ ಸಂಘದ ಮಾಜಿ ಅಧ್ಯಕ್ಷರಾದ ಡಾ. ಸದಾನಂದ ಪೆರ್ಲ ಅವರು ಸನ್ಮಾನಿಸಿ ಗೌರವಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸಾಧಕರು, ಕನ್ನಡ ರಾಜ್ಯೋತ್ಸವದ ಪ್ರಶಸ್ತಿಯು ತಮ್ಮ ಸಾಹಿತ್ಯ, ಸಂಶೋಧನೆ ಮತ್ತು ಸಾಂಸ್ಕೃತಿಕ ಸೇವೆಗೆ ಸಂದ ಗೌರವವಾಗಿದ್ದು, ಮುಂದಿನ ದಿನಗಳಲ್ಲಿ ನಾಡು-ನುಡಿಯ ಸೇವೆಗೆ ಮತ್ತಷ್ಟು ಸ್ಫೂರ್ತಿ ನೀಡಿದೆ ಎಂದು ಕೃತಜ್ಞತೆ ಸಲ್ಲಿಸಿದರು.


ಸನ್ಮಾನ ನೆರವೇರಿಸಿದ ಡಾ. ಸದಾನಂದ ಪೆರ್ಲ ಅವರು ಮಾತನಾಡಿ, ಕರಾವಳಿ ಮತ್ತು ಕಲ್ಯಾಣ ಕರ್ನಾಟಕದ ಸಾಂಸ್ಕೃತಿಕ ಕೊಂಡಿಯನ್ನು ಬೆಸೆಯುವಲ್ಲಿ ಇಂತಹ ಸಾಧಕರ ಕೊಡುಗೆ ಅಪಾರವಾಗಿದೆ ಎಂದು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಅಕಾಡೆಮಿಯ ಪದಾಧಿಕಾರಿಗಳು, ಸಾಹಿತ್ಯಾಸಕ್ತರು ಹಾಗೂ ಗಣ್ಯರು ಉಪಸ್ಥಿತರಿದ್ದರು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top