ನ.22ರಂದು ರೋಟರಿ ಚಿಣ್ಣರ ಉತ್ಸವ

Shreya Hegde
0



ಮಂಗಳೂರು: ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್, ರೋಟರ‍್ಯಾಕ್ಟ್ ಕ್ಲಬ್  ಮಂಗಳೂರು ಸಿಟಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ, ತಮ್ಮ ಸಮಾಜ ಸೇವಾ ಚಟುವಟಿಕೆಗಳ ಅಂಗವಾಗಿ 26ನೇ ವಾರ್ಷಿಕ ರೋಟರಿ ಚಿಣ್ಣರ ಉತ್ಸವ -ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧಾಕೂಟವನ್ನು ರವಿವಾರ ತಾ.22.11.2026ರಂದು ಕೆನರಾ ಹೈಸ್ಕೂಲ್ ಉರ್ವ ಮಂಗಳೂರು ಆವರಣದಲ್ಲಿ ಬೆಳಗ್ಗೆ 9 ಗಂಟೆಗೆ ಆಯೋಜಿಸಲಾಗಿದೆ ಎಂದು ಚಿಣ್ಣರ ಉತ್ಸವದ ಸಂಘಟನಾ ಅಧ್ಯಕ್ಷ ಡಾ. ದೇವದಾಸ್ ರೈ ಅವರು ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಿದರು.


ಈ ಒಂದು ದಿನದ ಕ್ರೀಡಾ ಸ್ಪರ್ಧಾಕೂಟ ಮತ್ತು ಮನೋರಂಜನಾ ಉತ್ಸವದಲ್ಲಿ ಜಿಲ್ಲೆಯ ವಿವಿಧ 10 ಮಕ್ಕಳ ರಕ್ಷಣೆ ಮತ್ತು ಆರೈಕೆ ಕೇಂದ್ರಗಳಿಂದ ಸುಮಾರು 434 ನಿವಾಸಿ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ನುಡಿದರು. ಈ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧಾಕೂಟವನ್ನು ಸಂಸದ ಕ್ಯಾ. ಬ್ರಿಜೇಶ್ ಚೌಟ ಉದ್ಘಾಟಸಲಿರುವರು. ವಲಯ ಸೇನಾನಿ ರೋ. ಜಿಲ್ಲಾ 3181 ವಲಯ 2ರ ಮಾಜಿ ಅಧ್ಯಕ್ಷ ರಾಜೇಶ್ ಶೆಟ್ಟಿ ಅವರು ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿರುವರು. ರೋಟರಿ ಮಂಗಳೂರು ಸೆಂಟ್ರಲ್ ಸಂಸ್ಥೆಯ ಅಧ್ಯಕ್ಷರಾದ ಬಿ.ಎನ್. ರವೀಂದ್ರ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.


ಸಮಾರೋಪ ಸಮಾರಂಭವು ನಗರದ ಕೆನರಾ ಹೈಸ್ಕೂಲ್, ಉರ್ವ, ಮಂಗಳೂರು ಸಭಾಂಗಣದಲ್ಲಿ ಸಂಜೆ 5 ಗಂಟೆಗೆ ಜರುಗಲಿದೆ. ರೋಟರಿ ಜಿಲ್ಲೆ 3181ರ ಮಾಜಿ ಗವರ್ನರ್ ಎಂ.ಡಿ. ಪ್ರಕಾಶ್ ಕಾರಂತ್ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು, ಸ್ಪರ್ಧಾ ವಿಜೇತರಿಗೆ ಬಹುಮಾನ ಹಾಗೂ ಸರ್ವಾಂಗೀಣ ಪ್ರದರ್ಶನ ನೀಡಿದ ಮಕ್ಕಳ ರಕ್ಷಣೆ ಮತ್ತು ಆರೈಕೆ ಕೇಂದ್ರಕ್ಕೆ ಪ್ರಶಸ್ತಿ ಫಲಕವನ್ನು ನೀಡಲಿರುವರು ಎಂದರು. ಕ್ರೀಡಾ ಮತ್ತು ಮನೋರಂಜನಾ ಉತ್ಸವದಲ್ಲಿ ಮಕ್ಕಳು ತಮ್ಮ ಆಕರ್ಷಕ ಪಥಸಂಚಲನ, ಪ್ರತಿಭಾ ಕೌಶಲ್ಯ ಮತ್ತು ಸಾಧನೆಯನ್ನು ಪ್ರದರ್ಶಿಸಲಿರುವರು. ಅವರ ಉತ್ಸಾಹಕ್ಕೆ ಪ್ರೋತ್ಸಾಹ ನೀಡಿ ಅವರ ಒಂದು ದಿನದ ಸಂತಸವನ್ನು ಹೊರಹೊಮ್ಮಿಸುವುದೇ ರೋಟರಿ ಸಂಸ್ಥೆಯ ಪ್ರಮುಖ ಉದ್ಧೇಶವಾಗಿದೆ. ಈ ಕ್ರೀಡಾಕೂಟವನ್ನು ರೋಟರಿ ಸಂಸ್ಥೆಯು 1996ರಿಂದ ಸತತವಾಗಿ ಆಯೋಜಿಸುತ್ತಿದೆ ಎಂದು ಡಾ.ದೇವದಾಸ್ ರೈ ತಿಳಿಸಿದರು.


ವೇದಿಕೆಯಲ್ಲಿ ರೋಟರಿ ಸಂಸ್ಥೆಯ ಅಧ್ಯಕ್ಷ ರವೀಂದ್ರ, ಕಾರ್ಯದರ್ಶಿ ಜಾಕ್ಸನ್ ಸಲ್ದಾನಾ, ಮಾಜಿ ಅಧ್ಯಕ್ಷ ಭಾಸ್ಕರ ರೈ, ರೋಟರಾಕ್ಟ್ ಸಂಸ್ಥೆಯ ಅಧ್ಯಕ್ಷ ರಕ್ಷಣ್, ಕಾರ್ಯದರ್ಶಿ ಮುಕೇಶ್, ಸಂಸ್ಥೆಯ ಮಾಧ್ಯಮ ಸಲಹೆಗಾರ ಎಂ.ವಿ. ಮಲ್ಯ ಉಪಸ್ಥಿತರಿದ್ದರು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top