ಸಂತೆಬೆನ್ನೂರು ಫೈಜ್ನಟ್ರಾಜ್ ಅವರಿಗೆ 2026ರ ಮುದ್ದಣ ಕಾವ್ಯ ಪ್ರಶಸ್ತಿ

Shreya Hegde
0



ಮೂಡುಬಿದಿರೆ: ಕಾಂತಾವರ ಕನ್ನಡ ಸಂಘದ ವತಿಯಿಂದ ನೀಡಲಾಗುವ 2026ನೇ ಸಾಲಿನ ಪ್ರತಿಷ್ಠಿತ ಮುದ್ದಣ ಕಾವ್ಯ ಪ್ರಶಸ್ತಿಗೆ ದಾವಣಗೆರೆಯ ಸಂತೆಬೆನ್ನೂರು ಫೈಜ್ನಟ್ರಾಜ್ ಅವರು ಆಯ್ಕೆಯಾಗಿದ್ದಾರೆ.


ಅವರ ‘ಅಂಗುಲಿಮಾಲನ ಎದುರು ಕೂತ ಬುದ್ಧ ನೀನಲ್ಲ’ ಎಂಬ ಕವನ ಹಸ್ತಪ್ರತಿಯು ಪ್ರಶಸ್ತಿಗೆ ಆಯ್ಕೆಯಾಗಿದೆ. ಈ ಬಾರಿ ಪ್ರಶಸ್ತಿಗಾಗಿ ಒಟ್ಟು 38 ಹಸ್ತಪ್ರತಿಗಳು ಸಲ್ಲಿಕೆಯಾಗಿದ್ದವು. ವಿಮರ್ಶಕರಾದ ಬೆಳಗೋಡು ರಮೇಶ ಭಟ್ (ವಿಭಾವರಿ ಭಟ್), ಡಾ. ರವಿಶಂಕರ್ ಜಿ.ಕೆ. ಮತ್ತು ಟಿ.ಎ.ಎನ್. ಖಂಡಿಗೆ ಅವರು ನೀಡಿದ ಅಂಕಗಳ ಆಧಾರದಲ್ಲಿ ಪ್ರಶಸ್ತಿಯನ್ನು ನಿರ್ಧರಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಡಾ. ನಾ. ಮೊಗಸಾಲೆ ತಿಳಿಸಿದ್ದಾರೆ.


1979ರಲ್ಲಿ ನಂದಳಿಕೆಯ ವರಕವಿ ಮುದ್ದಣ ಅವರ ಹೆಸರಿನಲ್ಲಿ ಸ್ಥಾಪನೆಯಾದ ಈ ಪ್ರಶಸ್ತಿಯು 10 ಸಾವಿರ ರೂ. ಗೌರವ ಸಂಭಾವನೆ, ತಾಮ್ರಪತ್ರ ಹಾಗೂ ಸನ್ಮಾನವನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭವು 2027ರ ಮಾರ್ಚ್ ತಿಂಗಳಲ್ಲಿ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸದಾನಂದ ನಾರಾವಿ ತಿಳಿಸಿದ್ದಾರೆ.

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top