ಸವಿತಾ ಶೆಟ್ಟಿ ಅವರಿಗೆ ಪಿ.ಎಚ್.ಡಿ. ಪದವಿ

Shreya Hegde
0



ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಸವಿತಾ ಶೆಟ್ಟಿ ಅವರು 'ಡಿಸೈನ್ ಅಂಡ್ ಡೆವಲಪ್‌ಮೆಂಟ್ ಆಫ್ ನಾಲೆಡ್ಜ್ ಬೇಸ್ ಫ್ರಮ್ ದ ಕ್ಲಿನಿಕಲ್ ಡಾಕ್ಯುಮೆಂಟ್ಸ್ ಯೂಸಿಂಗ್ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಟೆಕ್ನಿಕ್ಸ್' ಎಂಬ ವಿಷಯದ ಕುರಿತು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ಘೋಷಿಸಿದೆ.


ಅವರು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕಿ ಡಾ. ಸಾರಿಕಾ ಹೆಗ್ಡೆ ಅವರ ಮಾರ್ಗದರ್ಶನದಲ್ಲಿ ಸಂಶೋಧನಾ ಕಾರ್ಯವನ್ನು ಕೈಗೊಂಡಿದ್ದರು. ಇವರು ನಿಟ್ಟೆಯ ಶ್ರೀ ಚಂದ್ರಹಾಸ ಶೆಟ್ಟಿ ಮತ್ತು ಶ್ರೀಮತಿ  ಕುಮುದಾ ಚಂದ್ರಹಾಸ್ ಶೆಟ್ಟಿ ದಂಪತಿಯ ಅವಳಿ ಪುತ್ರಿಯರಲ್ಲಿ ಒಬ್ಬರಾಗಿರುತ್ತಾರೆ. ಇವರ ಶಿಕ್ಷಣದ ಸಂಪೂರ್ಣ ವೆಚ್ಚವನ್ನು ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿಗಳಾಗಿದ್ದ ಶ್ರೀಯುತ ಎನ್. ವಿನಯ ಹೆಗ್ಡೆಯವರು ಭರಿಸಿರುತ್ತಾರೆ. ಸವಿತಾ ಶೆಟ್ಟಿ ಅವರು ಮೂಡುಬಿದಿರೆಯ ಮಿಥುನ್ ಎಂ. ಶೆಟ್ಟಿಯವರ ಧರ್ಮಪತ್ನಿ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top