ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಪುತ್ತೂರು ಮತ್ತು ಅಂಬಿಕಾ ವಿದ್ಯಾಲಯ ಇವರ ಸಹಯೋಗದಲ್ಲಿ ಬಪ್ಪಳಿಗೆ ಅಂಬಿಕಾ ವಿದ್ಯಾಲಯದಲ್ಲಿ ನವೆಂಬರ್ 5 ರಂದು ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯು ನಡೆಯಿತು.
ಈ ಸ್ಪರ್ಧೆಯಲ್ಲಿ ಸುದಾನ ಪ್ರೌಢಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿಗಳಾದ ಆರ್ಯನ್ ಪಿ ಎಲ್ ಮತ್ತು ಎಂ ಸಮರ್ಥ ಸುಮಂತ್ ಗುಂಪು ವಿಭಾಗದ ಇಂಜಿನಿಯರಿಂಗ್ ವಿಷಯಾಧಾರಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಜೆಯಾಗಿದ್ದಾರೆ. ವೈಯಕ್ತಿಕ ವಿಭಾಗದಲ್ಲಿ ಒಂಬತ್ತನೇ ತರಗತಿಯ ಆದಿತ್ಯ ಕೆ ರಸಾಯನ ಶಾಸ್ತ್ರ ವಿಭಾಗದಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಇವರಿಗೆ ವಿಜ್ಞಾನ ಶಿಕ್ಷಕರಾದ ಶ್ರೀಮತಿ ರೇಖಾಮಣಿ ಮತ್ತು ಶ್ರೀಮತಿ ಪ್ರತಿಮಾ ಎನ್ ಜಿ ಮಾರ್ಗದರ್ಶನ ಮಾಡಿದ್ದು, ಶಾಲಾ ಆಡಳಿತ ಮಂಡಳಿ, ಶಾಲಾ ಮುಖ್ಯ ಶಿಕ್ಷಕಿ ಹಾಗೂ ಶಿಕ್ಷಕರು ಅಭಿನಂದಿಸಿ ಶುಭಹಾರೈಸಿದ್ದಾರೆ.

