ಮಂಗಳೂರು: ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯ ಶಾಲಾ ಮೈದಾನದಲ್ಲಿ ಕನ್ನಡ ನಾಡು ನುಡಿಯ ರಕ್ಷಣೆಗೆ ಪಣತೊಡುವ ಕರ್ನಾಟಕದ ಏಕೀಕರಣದ ಶುಭ ದಿನದಂದು ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಕ್ತಿ ರೆಸಿಡೆನ್ಶಿಯಲ್ ಶಾಲಾ ಪ್ರಾಂಶುಪಾಲೆ ಸುರೇಖ ಆರ್ ಭಟ್ ಅವರು ದೀಪವನ್ನು ಬೆಳಗಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಅಧ್ಯಕ್ಷ ಸ್ಥಾನದಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಪ್ರಧಾನ ಸಲಹೆಗಾರರಾದ ರಮೇಶ್ ಕೆ ಅವರು ಧ್ವಜಾರೋಹಣವನ್ನು ನೆರವೇರಿಸಿ ನಂತರ ಮಾತನಾಡಿದ ಅವರು ನಮ್ಮ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ರಾಜ್ಯದ 31 ಜಿಲ್ಲೆಗಳಿಂದ ವ್ಯಾಸಂಗ ಮಾಡುತ್ತಿದ್ದಾರೆ. ಕರ್ನಾಟಕದ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ ಭವ್ಯವಾದದ್ದು. ಇಲ್ಲಿ ಆಹಾರ, ಆಚರಣೆ, ಉಡುಗೆ-ತೊಡುಗೆಗಳಲ್ಲಿ, ಜೀವನ ಪದ್ಧತಿಯಲ್ಲಿ ವೈವಿಧ್ಯತೆಯನ್ನು ನಾವು ಕಾಣಬಹುದು. ರೈತರು ಮತ್ತು ಕವಿಗಳು ಕರ್ನಾಟಕದ ಆಸ್ತಿ ಅವರಿಬ್ಬರಿಗೂ ಸಮಾನವಾದ ಗೌರವವನ್ನು ನೀಡಬೇಕು ಎಂದು ಕರ್ನಾಟಕ ರಾಜ್ಯೋತ್ಸವದ ಶುಭಾಶಯವನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಆಯೋಜಿಸಲಾಗಿತ್ತು, ವಿದ್ಯಾರ್ಥಿಗಳು ಸಾಮೂಹಿಕವಾಗಿ ನಾಡಗೀತೆಯನ್ನು ಹಾಡಿದರು. ಸಂಗೀತ ಶಿಕ್ಷಕಿ ಹಾಗೂ ಶಿಕ್ಷಕ ಶರಣಪ್ಪ ರವರು ಕನ್ನಡ ನಾಡು ನುಡಿಯ ಹಾಡಿ ನ ಸರಮಾಲೆಯನ್ನು ಪ್ರಸ್ತುತ ಪಡಿಸಿದರು. ಶಾಲಾ ಶಿಕ್ಷಕ - ಶಿಕ್ಷಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಿಕ್ಷಕಿ ಹರಿಣಿಯವರು ಪ್ರಾಸ್ತಾವಿಕ ಭಾಷಣ ಮಾಡಿದರೆ, ಶಿಕ್ಷಕಿ ಕೀರ್ತನ ಸ್ವಾಗತಿಸಿದರು. ಶಿಕ್ಷಕ ಪ್ರಶಾಂತ್ ವಂದಿಸಿದರು ಹಾಗು ಶಿಕ್ಷಕ ಶರಣಪ್ಪ ಕಾರ್ಯಕ್ರಮ ನಿರೂಪಿಸಿದರು.

.png)
