ವಿವೇಕಾನಂದ ಕಾನೂನು ಮಹಾವಿದ್ಯಾಲಯದ ನೂತನ ಆಡಳಿತ ಮಂಡಳಿ ರಚನೆ

Shreya Hegde
0

ಅಧ್ಯಕ್ಷ: ಕೆ. ವಿಶ್ವಾಸ್ ಶೆಣೈ | ಸಂಚಾಲಕ: ಮಹೇಶ್ ಕಜೆ | ಕೋಶಾಧಿಕಾರಿ: ಸುರೇಶ್ ರೈ ಪಡ್ಡಂಬೈಲು




ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಇದರ ಪ್ರತಿಷ್ಠಿತ ಘಟಕ ಸಂಸ್ಥೆಗಳಲ್ಲಿ ಒಂದಾಗಿರುವ ವಿವೇಕಾನಂದ ಕಾನೂನು ಮಹಾವಿದ್ಯಾಲಯ, ಪುತ್ತೂರು ಇದರ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ ಹಾಗೂ ಜವಾಬ್ದಾರಿ ಸ್ವೀಕಾರ ಸಮಾರಂಭವು ನ. 6ರಂದು,  ಕಾಲೇಜಿನ ಆಡಳಿತ ಮಂಡಳಿ ಕಚೇರಿಯಲ್ಲಿ ಜರುಗಿತು. ಕಾಲೇಜು ಆಡಳಿತ ಮಂಡಳಿ ನೂತನ ಅಧ್ಯಕ್ಷರಾಗಿ ಉದ್ಯಮಿ ಕೆ. ವಿಶ್ವಾಸ್ ಶೆಣೈ, ಸಂಚಾಲಕರಾಗಿ ನ್ಯಾಯವಾದಿ ಮಹೇಶ್ ಕಜೆ ಹಾಗೂ ಕೋಶಾಧಿಕಾರಿಯಾಗಿ ನ್ಯಾಯವಾದಿ ಸುರೇಶ್ ರೈ ಪಡ್ಡಂಬೈಲು ಆಯ್ಕೆಯಾದರು. ಅದೇ ರೀತಿ ನೂತನ ಸದಸ್ಯರಾಗಿ ಮಹೇಶ್ ಕೆ.ಸವಣೂರು, ಡಾ. ಅರುಣ್ ಶ್ಯಾಮ್, ಮಾಧವ ಪೂಜಾರಿ, ವಿದ್ಯಾಗೌರಿ, ಶೋಭಾ ಕೊಳತ್ತಾಯ, ಸಂತೋಷ್ ರೈ ಕೈಕಾರ ಆಯ್ಕೆಯಾಗಿದ್ದಾರೆ.


ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಕಡಬ ಹಾಗೂ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ. ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ಸಂಧರ್ಭದಲ್ಲಿ ಮಾತೃ ಸಂಸ್ಥೆಯ ನಿರ್ದೇಶಕರಾದ ರವೀಂದ್ರ ರೈ, ರಮೇಶ್ಚಂದ್ರ, ಮಹಾಲಕ್ಷ್ಮೀ ಕೆ. ಹಾಗೂ ಆಡಳಿತ ಮಂಡಳಿಯ ನಿಕಟಪೂರ್ವ ಅಧ್ಯಕ್ಷ ಸುರೇಂದ್ರ ಕಿಣಿ ಜಿ., ಕೋಶಾಧಿಕಾರಿ ಯಶೋಧರ ಜೈನ್ ಹಾಗೂ ಸದಸ್ಯರುಗಳಾದ ಸುರೇಶ್ ರೈ ಪಡ್ಡಂಬೈಲು, ಅರುಣ್ ಬಿ.ಕೆ., ಚೇತನ್ ನಾಯಕ್, ಇಂದುಶೇಖರ್, ಪ್ರಮಿತಾ ಸಿ. ಹಾಸ್, ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತೃಸಂಸ್ಥೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಲಕ್ಷ್ಮೀಪ್ರಸಾದ್ ಬೊಟ್ಯಾಡಿ, ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ಅಧ್ಯಯನ ವಿಭಾಗದ ನಿರ್ದೇಶಕ ಡಾ. ಬಿ. ಕೆ.ರವೀಂದ್ರ, ಪ್ರಾಂಶುಪಾಲರಾದ ಡಾ. ಅಕ್ಷತಾ ಎ. ಪಿ., ಅಧ್ಯಾಪಕ ವೃಂದ ಮತ್ತು ಬೋಧಕೇತರ ವೃಂದದವರು ಉಪಸ್ಥಿತರಿದ್ದು, ನೂತನ ಸಮಿತಿಗೆ ಶುಭಹಾರೈಸಿದರು.


ನಿರ್ಗಮಿತ ಸಮಿತಿಯ ಅಧ್ಯಕ್ಷರು ಮತ್ತು ಸಂಚಾಲಕರು ನೂತನ ಆಡಳಿತ ಮಂಡಳಿಗೆ ಶುಭ ಹಾರೈಸಿ ತಮ್ಮ ಸೇವಾ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸಿದರು. ನೂತನ ಸಮಿತಿಯ ಅಧ್ಯಕ್ಷರು ಮತ್ತು ಸಂಚಾಲಕರು ಮುಂದಿನ ದಿನಗಳಲ್ಲಿ ಸಂಸ್ಥೆಯ ಅಭಿವೃದ್ಧಿಗೆ ಎಲ್ಲರೂ ಒಂದಾಗಿ ಒಟ್ಟಾಗಿ ಶ್ರಮಿಸುವ ಎಂದು ಎಲ್ಲರ ಸಹಕಾರವನ್ನು ಕೋರಿದರು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top